ರಸಪ್ರಶ್ನೆ

 2024-25 ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ...



***

     ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರ ವಾಗುವ ರಸಪ್ರಶ್ನೆ ಸ್ಪರ್ಧೆಯ ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ವೀಕ್ಷಿಸುವಂತೆ ಕ್ರಮ ಕೈಗೊಳ್ಳುವ ಬಗ್ಗೆ..



2021- 22 ನೇ ಸಾಲಿನಲ್ಲಿ ವಾರ್ಷಿಕ ಯೋಜನಾ ಮಂಡಳಿಯ ಅನುಮೋದನೆಯಂತೆ ರಾಷ್ಟ್ರೀಯ ಆವಿಷ್ಕಾರ ಅಭಿಯಾನ್ ಕಾರ್ಯಕ್ರಮದಡಿ ರಸಪ್ರಶ್ನೆ ಸ್ಪರ್ಧೆಯನ್ನು ಆಜಾದಿ ಅಮೃತ್ ಮಹೋತ್ಸವ ಆಚರಣೆಯ ಅಂಗವಾಗಿ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ  5 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಗಣಿತ, ವಿಜ್ಞಾನ, ತಂತ್ರಜ್ಞಾನ, ಸಾಮಾನ್ಯ ಜ್ಞಾನ, ಭಾಷೆ, ಭಾರತ ದೇಶದ ಪರಂಪರೆ ಹಾಗೂ ವಿವಿಧ ಇತರೆ ವಿಷಯಗಳ ಕುರಿತು ಬ್ಲಾಕ್, ಜಿಲ್ಲಾ ಹಾಗೂ ವಿಭಾಗ ಮಟ್ಟದಲ್ಲಿ ಆನ್ಲೈನ್ ಮೂಲಕ ಯಶಸ್ವಿಯಾಗಿ ಆಯೋಜಿಸಲಾಯಿತು. ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮವನ್ನು ವಿಡಿಯೋ ಮೋಡ್ ನಲ್ಲಿ ನಡೆಸಲಾಯಿತು. 


    ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ದೇಶದ ಶ್ರೀಮಂತ ಸಂಸ್ಕೃತಿಯನ್ನು ಪರಿಚಯಿಸಿ ಅವರಲ್ಲಿ ಜ್ಞಾನಾರ್ಜನೆಯನ್ನು ಹೆಚ್ಚಿಸುವ ಸ್ಪರ್ಧಾ ಮನೋಭಾವನೆ ಬೆಳೆಸುವ ಕಲಿಕೆಯಲ್ಲಿ ಆಸಕ್ತಿಯನ್ನು ಉತ್ತೇಜಿಸುವ ಉದ್ದೇಶದಿಂದ ವಿಡಿಯೋ ಮೋಡ್ ನಲ್ಲಿ ನಡೆದ ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆಯನ್ನು ದೂರದರ್ಶನ ಚಂದನ ವಾಹಿನಿಯಲ್ಲಿ ದಿನಾಂಕ್ 27 - 8 - 2022 ರಂದು ಮುಂಜಾನೆ 9:30 ರಿಂದ 10.30 ರವರೆಗೆ ಕಿರಿಯರ ವಿಭಾಗ  5 ರಿಂದ 7ನೇ ತರಗತಿ ಹಾಗೂ 28 - 08 - 2022 ರಂದು ಮುಂಜಾನೆ 9 : 30 ರಿಂದ 10:30ರ ವರೆಗೆ ಹಿರಿಯರ ವಿಭಾಗ 8 ರಿಂದ 10ನೇ ತರಗತಿಗೆ ಪ್ರತ್ಯೇಕವಾಗಿ ಪ್ರಸಾರ ಮಾಡಲಾಗುವುದು.



 5 to 7   27/08/2022  Time 09:30 to 10:30


8 to 10   28/08/2022  Time 09:30 to 10:30



ಎಲ್ಲಾ ಜಿಲ್ಲೆಯ ಎಲ್ಲಾ ಶಾಲೆಗಳ ಹಾಗೂ ಹಾಗೂ ವಸತಿ ಶಾಲೆಗಳ ವಿದ್ಯಾರ್ಥಿಗಳು ಶಿಕ್ಷಕರು ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರವಾಗುವ ಈ ಕಾರ್ಯಕ್ರಮವನ್ನು ವೀಕ್ಷಿಸಿ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕ್ರಮ ಕೈಗೊಳ್ಳಲು ಸೂಚಿಸಿದೆ.