ಯೋಗ ದಿನಾಚರಣೆ

 



DOWNLOAD PDF 



ದಿನಾಂಕ:21.06.2023 ರಂದು

 *ಅಂತಾರಾಷ್ಟ್ರೀಯ ಯೋಗ ದಿನಾಚರಣೆ.*


*ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಹಿನ್ನೆಲೆ* 

ಜೂನ್ 21 ಅಂತಾರಾಷ್ಟ್ರೀಯ ಯೋಗ ದಿನವಾಗಿದೆ. *ಯೋಗ* ಎಂಬುದು  ಭಾರತದಲ್ಲಿ ಹುಟ್ಟಿರುವ ಜಾಗತೀಕ ವಿದ್ಯೆಯಾಗಿದೆ. ಯೋಗದ ಮಹತ್ವವನ್ನು ಅರಿತ ವಿಶ್ವಸಂಸ್ಥೆ ಪ್ರತೀ ವರ್ಷದ *ಜೂನ್ 21* ರಂದು *ಅಂತಾರಾಷ್ಟ್ರೀಯ ಯೋಗ ದಿನ* ವನ್ನಾಗಿ ಆಚರಿಸಬೇಕೆಂದು  ಘೋಷಿಸಿದೆ.


ಯೋಗವು 6000 ವರ್ಷಕ್ಕೂ ಹಳೆಯದಾದ ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಕ ಅಭ್ಯಾಸವಾಗಿದೆ. ಪ್ರತಿವರ್ಷದ ಯೋಗದ ಆಚರಣೆಯು ಯೋಗ, ಧ್ಯಾನ, ಸಭೆಗಳು, ಚರ್ಚೆಗಳು, ಸಾಂಸ್ಕೃತಿಕ ಪ್ರದರ್ಶನಗಳು ಇತ್ಯಾದಿಗಳನ್ನು ಅಭ್ಯಸಿಸುವುದರ ಮೂಲಕ ಎಲ್ಲಾ ರಾಷ್ಟ್ರ್ರಗಳ ಜನರಿಂದ ಆಚರಿಸಲ್ಪಡುವ ದಿನವಾಗಿದೆ. 2014 ಸೆಪ್ಟೆಂಬರ್ ನಲ್ಲಿ ನಡೆದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೊದಲ ಬಾರಿಗೆ ಯೋಗ ದಿನಾಚರಣೆಯನ್ನು ಆಚರಿಸುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪವನ್ನು ಮಂಡಿಸಿದ್ದರು.


ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿ 11 ಡಿಸೆಂಬರ್ 2014 ರಂದು ಜೂನ್ 21 ಅನ್ನು ಯೋಗ ದಿನವನ್ನಾಗಿ ಆಚರಿಸಲಾಗುವುದು ಎಂದು ಘೋಷಿಸಿತು. ಇದರಿಂದ ಪ್ರತೀ ವರ್ಷ ಅಂತಾರಾಷ್ಟ್ರೀಯ ಯೋಗ ದಿನವನ್ನು ವಿಶ್ವ ಯೋಗ ದಿನವನ್ನಾಗಿ ಆಚರಿಸಲಾಗುತ್ತದೆ.


*ಯೋಗದ ಮಹತ್ವ*

ಯೋಗ ವ್ಯಾಯಾಮ ಮಾತ್ರವಲ್ಲದೆ ನಿಮ್ಮೊಂದಿಗೆ, ವಿಶ್ವ ಹಾಗೂ ಪ್ರಕೃತಿಯ ಜೊತೆಗೆ ಏಕತೆಯ ಅರ್ಥವನ್ನು ಕಂಡುಹಿಡಿಯಲು ನೆರವಾಗುತ್ತದೆ. ನಮ್ಮ ಜೀವನಶೈಲಿ ಹಾಗೂ ಪ್ರಜ್ಞೆ ರಚಿಸುವ ಮೂಲಕ ಹಮಾಮಾನ ಬದಲಾವಣೆ ನಿಭಾಯಿಸಲು ಮತ್ತು ಯೋಗಕ್ಷೇಮವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಯೋಗವು ಮನಸ್ಸು ಮತ್ತು ದೇಹ, ಚಿಂತನೆ ಮತ್ತು ಕ್ರಿಯೆ, ಸಂಯಮ ಮತ್ತು ಸಾರ್ಥಕತೆಯನ್ನು ಒಗ್ಗೂಡಿಸುತ್ತದೆ. ಹಾಗೆಯೇ ಪ್ರಕೃತಿ ಮತ್ತು ಮನುಷ್ಯ ನಡುವೆ ಸಾಮರಸ್ಯವನ್ನುಂಟು ಮಾಡುತ್ತದೆ. ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸುವ ವಿಶೇಷ ಕಲೆಯಾಗಿದೆ.


*ಇತಿಹಾಸ:*

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಕರಡು ಪ್ರಸ್ತಾವನೆಯನ್ನು 2014 ಡಿಸೆಂಬರ್ ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ಖಾಯಂ ಪ್ರತನಿಧಿಯಾಗಿರುವ *ಅಶೋಕ್ ಕುಮಾರ್* ಮಂಡಿಸಿದ್ದರು. ವಿಶ್ವಸಂಸ್ಥೆಗೆ ಇದು ಐತಿಹಾಸಿಕ ಕ್ಷಣವಾಗಿದ್ದು, ಅದರ ಸದಸ್ಯ ರಾಷ್ಟ್ರಗಳು ಅಭೂತಪೂರ್ವ ಬೆಂಬಲ ಸೂಚಿಸಿದ್ದರು. ವಿಶ್ವ ಸಂಸ್ಥೆಯ 193 ರಾಷ್ಟ್ರಗಳ ಪೈಕಿ 177 ದೇಶಗಳು ಅನುಮೋದನೆಯನ್ನು ನೀಡಿದ್ದವು. 2015, ಜೂನ್ 21 ರಂದು *ಮೊದಲ ಅಂತಾರಾಷ್ಟ್ರೀಯ ಯೋಗ ದಿನವನ್ನು* ವಿಶ್ವಾದ್ಯಂತ ಆಚರಿಸಲಾಯಿತು.


*ಜೂನ್21 ರಂದೇ ಯೋಗದಿನಾಚರಣೆ ಏಕೆ?*

ವರ್ಷದಲ್ಲಿ ಉತ್ತರ ಗೋಳಾರ್ಧದ ಅತಿ ಉದ್ದದ ಹಾಗೂ ದಕ್ಷಿಣ ಗೋಳಾರ್ಧದ ಅತಿ ಚಿಕ್ಕ ದಿನವನ್ನು ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಆಯ್ಕೆ ಮಾಡಲಾಗಿದೆ. ಇದನ್ನು ಬೇಸಿಗೆ ಅಯನ ಸಂಕ್ರಾಂತಿ ದಿನವೆಂದು (ವರ್ಷದಲ್ಲಿನ ಅತ್ಯಂತ ಹೆಚ್ಚು ಹಗಲುಳ್ಳ ದಿನ) ಕರೆಯಲಾಗುತ್ತದೆ. ಯೋಗದ ದೃಷ್ಟಿಕೋನದಲ್ಲಿ ಇದು ಅತ್ಯಂತ ಹೆಚ್ಚು ಮಹತ್ವ ಪಡೆದಿದೆ. ಇದು ದಕ್ಷಿಣಯಾನಕ್ಕೆ ಪರಿವರ್ತನೆ ಎಂದು ಗುರುತಿಸಲಾಗುತ್ತದೆ.


ದಕ್ಷಿಣಯಾನವನ್ನು ಆಧ್ಯಾತ್ಮಿಕ ಅಭ್ಯಾಸಗಳಿಗೆ ನೈಸರ್ಗಿಕ ಬೆಂಬಲವೆಂದು ಪರಿಗಣಿಸಲಾಗುತ್ತದೆ. ಆದಿ ಕಾಲದಲ್ಲಿ ಸೂರ್ಯಾಭಿಮುಖವಾಗಿ ದೃಷ್ಟಿ ನೆಟ್ಟು ಧೀ ಶಕ್ತಿ ಉದ್ದೀಪನಗೊಳಿಸುತ್ತಿದ್ದ ದಿನ ಇದಾಗಿದೆ ಎಂದು ನಂಬಲಾಗಿದೆ. ಹಾಗಾಗಿ ಈ ಪರಿವರ್ತನೆಯು ಯೋಗ ಅಭ್ಯಾಸಿಗರಿಗೆ ಬೆಂಬಲಿಸಲಾಗುತ್ತದೆ ಎಂಬ ನಂಬಿಕೆಯಿದೆ. ಬೇಸಿಗೆ ಅಯನ ಸಂಕ್ರಾಂತಿಯ ಬಳಿಕ ಮೊದಲ ಹುಣ್ಣಿಮೆಯನ್ನು ಗುರು ಪೂರ್ಣಿಮಾ ಎಂದು ಕರೆಯಲಾಗುತ್ತದೆ.


ಜೂನ್ 21 ಉತ್ತರ ಗೋಳಾರ್ಧದ ವರ್ಷದ ಅತಿ ದೀರ್ಘವಾದ ದಿನವಾಗಿದೆ. ಪ್ರಧಾನಿ ಮೋದಿ ತಮ್ಮ ಹೇಳಿಕೆಯಲ್ಲಿ, ಭಾರತೀಯರಿಗೆ ಪ್ರಕೃತಿಗೆ ಗೌರವ ಸಲ್ಲಿಸುವುದು ಆಧ್ಯಾತ್ಮಿಕತೆಯ ಅವಿಭಾಜ್ಯ ಅಂಗವಾಗಿದೆ. ಹಾಗೆಯೇ ಪ್ರಕೃತಿಯ ಕೊಡುಗೆಯನ್ನು ಅತ್ಯಂತ ಪವಿತ್ರವೆಂದು ಪರಿಗಣಿಸುತ್ತೇವೆ ಎಂದು ಹೇಳಿದ್ದರು.


*ಆಧ್ಯಾತ್ಮಿಕ ಹಿನ್ನೆಲೆ:*

ಇವೆಲ್ಲದರ ಹೊರತಾಗಿ, ಶಿವ ದೇವರು ಈ ದಿನದಂದು ಉಳಿದ ಮಾನವ ಜನಾಂಗಕ್ಕೆ ಯೋಗದ ದಿನವನ್ನು ಉಪನ್ಯಾಸ ನೀಡಲು ಪ್ರಾರಂಭಿಸಿದನೆಂಬ ನಂಬಿಕೆಯಿದೆ. ಶಿವ ದೇವರು ಯೋಗದ ಆದಿ ಗುರುವಾದ ದಿನವೂ ಹೌದು. ಕೆಲವು ಇತಿಹಾಸಕಾರರು ಶಿವನನ್ನು ಯೋಗದ ಪಿತಾಮಹ ಎನ್ನುತ್ತಾರೆ. ಇನ್ನೂ ಕೆಲವರು ಪತಂಜಲಿ ಆಧುನಿಕ ಯೋಗದ ಪಿತಾಮಹ ಎಂದು ಹೇಳುತ್ತಾರೆ.


*ಆಚರಣೆ:*

2015 ಜೂನ್ 21ರಂದು ಮೊದಲ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಆಯುಷ್ ಸಚಿವಾಲಯದ ನೇತೃತ್ವದಲ್ಲಿ ಆ ದಿನವನ್ನು ರಾಜಪಥದಲ್ಲಿ ಭಾರೀ ವಿಜ್ರಂಭಣೆಯಿಂದ ಆಚರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಹಾಗೂ 84 ರಾಷ್ಟ್ರಗಳ ಗಣ್ಯರು ಭಾಗವಹಿಸಿದ ಕಾರ್ಯಕ್ರಮದಲ್ಲಿ 21 ಯೋಗಾಸನಗಳನ್ನು ಅಭ್ಯಸಿಸಲಾಯಿತು.


2015ರಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸ್ಮರಣಾರ್ಥವಾಗಿ ಭಾರತೀಯ ರಿಸರ್ವ್ ಬ್ಯಾಂಕ್ 10 ರೂಪಾಯಿಯ ನಾಣ್ಯವನ್ನು ಬಿಡುಗಡೆಮಾಡಿತು.

*ರಾಜಪಥದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಎರಡು ಹೊಸ ಗಿನ್ನಿಸ್ ದಾಖಲೆಯನ್ನು ಸೃಷ್ಟಿಸಿತು*. ಮೊದಲನೆಯದಾಗಿ ವಿಶ್ವದ ಅತಿ ದೊಡ್ಡ ಯೋಗ ಕ್ಲಾಸ್‍ನಲ್ಲಿ ದಾಖಲೆ ಸಂಖ್ಯೆಯ *35,985* ಮಂದಿ ಭಾಗವಹಿಸಿದ್ದರು. ಎರಡನೇಯದಾಗಿ ಗರಿಷ್ಠ ಸಂಖ್ಯೆಯ ರಾಷ್ಟ್ರೀಯತೆಯನ್ನು (84) ಹೊಂದಿರುವ ವ್ಯಕ್ತಿಗಳು ಭಾಗವಹಿಸಿದ್ದರು.


2017ರಲ್ಲಿ ಲಕ್ನೊದಲ್ಲಿ 51,000 ಸ್ಪರ್ಧಿಗಳೊಂದಿಗೆ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.  2022ರ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ವಿಶ್ವದಾಖಲೆ ಬರೆದಿದೆ. ನಗರದ ರೇಸ್‍ಕೋರ್ಸ್ ಆವರಣದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಸುಮಾರು 60 ಸಾವಿರ ಜನರು ಭಾಗವಹಿಸುವುದರ ಮೂಲಕ ದೇಶದಲ್ಲೇ ಬೃಹತ್ ಮಟ್ಟದ ಯೋಗ ದಿನಾಚರಣೆ ಅದಾಗಿತ್ತು.


*ಅಂತಾರಾಷ್ಟ್ರೀಯ ಯೋಗ ದಿನ ಆಚರಣೆಯ ಉದ್ದೇಶ*


'ಅಂತಾರರಾಷ್ಟ್ರೀಯ ಯೋಗ ದಿನಾಚರಣೆ'ಯ ಉದ್ದೇಶವು ಯೋಗದ ಅನೇಕ ಭೌತಿಕ ಮತ್ತು ಆಧ್ಯಾತ್ಮಿಕ ಪ್ರಯೋಜನಗಳ ಬಗ್ಗೆ ಪ್ರಪಂಚದ ಜನರಿಗೆ ಅರಿವು ಮೂಡಿಸುವುದಾಗಿದೆ. ಪ್ರತಿ ವರ್ಷ ಈ ಕಾರ್ಯಕ್ರಮಕ್ಕೆ ವಿಭಿನ್ನ ಥೀಮ್ ಇರುತ್ತದೆ.

 'ಅಂತಾರಾಷ್ಟ್ರೀಯ ಯೋಗ ದಿನ 2023' ಥೀಮ್ 

'ಮಾನವೀಯತೆ'  


*ಅಂತಾರಾಷ್ಟ್ರೀಯ ಯೋಗ ದಿನದ ಥೀಮ್ ಗಳು:*

2022 ರ ಅಂತಾರರಾಷ್ಟ್ರೀಯ ಯೋಗ ದಿನದ ಥೀಮ್ 

'ಒಟ್ಟಿಗೆ ಯೋಗ' ಆಗಿತ್ತು.


ಅಂತಾರಾಷ್ಟ್ರೀಯ ಯೋಗ ದಿನದ 2021 ರ ಥೀಮ್

 'ಯೋಗ ಯೋಗಕ್ಷೇಮಕ್ಕಾಗಿ'.


ಅಂತಾರಾಷ್ಟ್ರೀಯ ಯೋಗ ದಿನದ 2020 ರ ಥೀಮ್

 'ಮನೆಯಲ್ಲಿ ಯೋಗ ಮತ್ತು ಕುಟುಂಬದೊಂದಿಗೆ ಯೋಗ'.


ಅಂತಾರಾಷ್ಟ್ರೀಯ ಯೋಗ ದಿನದ 2019 ರ ಥೀಮ್ 

"ಹೃದಯಕ್ಕಾಗಿ ಯೋಗ".


ಅಂತಾರಾಷ್ಟ್ರೀಯ ಯೋಗ ದಿನದ 2018 ರ ಥೀಮ್ 

"ಶಾಂತಿಗಾಗಿ ಯೋಗ".


ಅಂತಾರಾಷ್ಟ್ರೀಯ ಯೋಗ ದಿನದ 2017 ರ ಥೀಮ್ 

"ಆರೋಗ್ಯಕ್ಕಾಗಿ ಯೋಗ".


ಅಂತಾರಾಷ್ಟ್ರೀಯ ಯೋಗ ದಿನದ 2016 ರ ಥೀಮ್ 

"ಯುವಕರನ್ನು ಸಂಪರ್ಕಿಸಿ".


ಅಂತಾರಾಷ್ಟ್ರೀಯ ಯೋಗ ದಿನದ 2015 ರ ಥೀಮ್ 

"ಸಾಮರಸ್ಯ ಮತ್ತು ಶಾಂತಿಗಾಗಿ ಯೋಗ".

(ವರದಿ ಮೂಲ: ಅಂತರ್ಜಾಲದ ಸ್ನೇಹಿತರು )

💐💐💐💐 

*ಎಲ್ಲ ಗುರುಹಿರಿಯರಿಗೆ, ಕಿರಿಯರಿಗೆ ವಿಶ್ವ ಯೋಗ ದಿನಾಚರಣೆಯ ಹಾರ್ದಿಕ ಶುಭಾಶಯಗಳು* 💐💐💐💐