ಚುನಾವಣಾ ದಿನ ಚುನಾವಣಾ ಸಿಬ್ಬಂದಿಯ ಊಟೋಪಚಾರಕ್ಕೆ ಅನುದಾನ ಬಿಡುಗಡೆ ಮಾಡುವ ಬಗ್ಗೆ...

 ಎಲ್ಲಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ಲೋಕಸಭಾ ಚುನಾವಣೆ ಗಾಗಿ ಮತಗಟ್ಟೆ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಊಟ ಹಾಗೂ ಉಪಚಾರ ವ್ಯವಸ್ಥೆ ಮಾಡಲು ಪ್ರತಿ ಮತಗಟ್ಟೆಗೆ ಮಾನ್ಯ ಜಿಲ್ಲಾಧಿಕಾರಿಗಳು ಒಂದು ಸಾವಿರ ರೂಪಾಯಿ ಅನುದಾನವನ್ನು ತಾಲೂಕ್ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಬಿಡುಗಡೆ ಮಾಡಲಿದ್ದಾರೆ.


     ಪೊಲೀಸ್ ವರಿಷ್ಠಾಧಿಕಾರಿಗಳು ಒಂದು ಮತಗಟ್ಟೆಗೆ ರೂ.250 ಸೇರಿಕೊಂಡು ಒಂದು  ಮತಗಟ್ಟೆಗೆ 1250 ಗಳನ್ನು ತಾಲೂಕು ಪಂಚಾಯತ್ ಕಾರ್ಮಿಕ ಅಧಿಕಾರಿಗಳ ಮುಖಾಂತರ ಸಂಬಂಧಿಸಿದ ಮತಗಟ್ಟೆ ಮುಖ್ಯೋಪಾಧ್ಯಾಯರ ಜಂಟಿ ಖಾತೆಗೆ ಹಣವನ್ನು ಜಮಾ ಮಾಡಲಾಗುವುದು .         ಈ ಕುರಿತು ತಮ್ಮೆಲ್ಲರ ಸಹಕಾರ ಅತ್ಯಗತ್ಯವಾಗಿದ್ದು ತಮ್ಮ ತಾಲೂಕಿನ ಸಹಾಯಕ ನಿರ್ದೇಶಕರೊಂದಿಗೆ ಕಳೆದ ವಿಧಾನಸಭಾ ಮಾದರಿಯಲ್ಲಿ ಅತ್ಯುತ್ತಮವಾಗಿ ಊಟ ವ್ಯವಸ್ಥೆಯನ್ನು ಮಾಡಲು ಎಲ್ಲರಲ್ಲಿ ವಿನಂತಿ....