Sslc ಫಲಿತಾಂಶ ಮೇ 8 ರಂದು ಪ್ರಕಟವಾಗುವ ಸಾಧ್ಯತೆ.

     ಎಂಟೂವರೆ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾಯುತ್ತಿರುವ ರಾಜ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಮೇ8 ರಂದು ಹೊರಬೀಳುವ ಸಾಧ್ಯತೆ ಇದೆ. ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಬಹುತೇಕ ಪೂರ್ಣ ಗೊಂಡಿದ್ದು ವಿದ್ಯಾರ್ಥಿಗಳು ಪಡೆದಿರುವ ಅಂಕಗಳ ಗಣಕೀಕರಣ ಪ್ರಕ್ರಿಯೆ ನಡೆಯುತ್ತಿದ್ದು, ಪೂರ್ಣಗೊಳ್ಳಲು ನಾಲ್ಕೈದು ದಿನಗಳು ಬೇಕಾಗಬಹುದು. ಎಲ್ಲ ಅಂದುಕೊಂಡಂತೆ ನಡೆದರೆ ಮೇ 8 ರಂದು ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಚಿಂತನೆ ನಡೆಸಿದೆ. ಒಂದು ವೇಳೆ,  ಗಣಕೀಕರಣ ಕಾರ್ಯ ವಿಳಂಬವಾದರೆ ಅಥವಾ ಸಮಯಕ್ಕೆ ಸರಿಯಾಗಿ ಮುಗಿಯದೆ ಹೋದರೆ, ಒಂದೆರಡು ದಿನ ತಡವಾಗಬಹುದು ಎಂದು ಮೂಲಗಳು ತಿಳಿಸಿವೆ.

       ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಮಾ.25 ರಿಂದ ಏ.6 ರವರೆಗೆ 2750 ಕೇಂದ್ರಗಳಲ್ಲಿ ನಡೆದಿತ್ತು. ಸುಮಾರು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.