ನಗದು ರಹಿತ ವೈದ್ಯಕೀಯ ಯೋಜನೆ ಜಾರಿಗೆ ಬರುವವರೆಗೂ ರಾಜ್ಯ ಸರ್ಕಾರದ ಗ್ರೂಪ್ ಸಿ ಮತ್ತು ಡಿ ಸರ್ಕಾರಿ ನೌಕರರ ವೈದ್ಯಕೀಯ ಭತ್ಯೆಯನ್ನು 200 ರೂ ಗಳಿಂದ 500 ರೂ ಗಳಿಗೆ ಹೆಚ್ಚಿಸಲಾಗಿದೆ....
ಗ್ರೂಪ್-'ಸಿ' ಮತ್ತು ಗ್ರೂಪ್-'ಡಿ' ವೃಂದದ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ ಲಭ್ಯವಿರುವ ವೈದ್ಯಕೀಯ ಭತ್ಯೆಯ ದರಗಳನ್ನು ಮಾಸಿಕ ರೂ.200/- ಗಳಿಂದ ಮಾಸಿಕ ರೂ.500/- ಗಳಿಗೆ 1ನೇ ಆಗಸ್ಟ್ 2024ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲು ಸರ್ಕಾರವು ಹರ್ಷಿಸುತ್ತದೆ.
2. ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ (ಕೆ.ಎ.ಎಸ್.ಎಸ್) ಸೌಲಭ್ಯವು ಅನುಷ್ಠಾನಗೊಳ್ಳುವವರೆಗೆ ಈ ವೈದ್ಯಕೀಯ ಸೌಲಭ್ಯವು ಲಭ್ಯವಿರುತ್ತದೆ.
3. ನಗದುರಹಿತ ವೈದ್ಯಕೀಯ ಸೌಲಭ್ಯ ಯೋಜನೆಯು ಅನುಷ್ಠಾನಗೊಂಡ ನಂತರದಲ್ಲಿ ವೈದ್ಯಕೀಯ ಭತ್ಯೆಯ ಮಂಜೂರಾತಿಯ ಈ ಆದೇಶವು ಜಾರಿಯಲ್ಲಿರುವುದು ಕೊನೆಗೊಳ್ಳುತ್ತದೆ ಮತ್ತು ನಗದುರಹಿತ (ಕೆ.ಎ.ಎಸ್.ಎಸ್) ಯೋಜನೆಯು ಅನುಷ್ಠಾನಗೊಂಡ ಬಳಿಕ ಯಾವುದೇ ಸರ್ಕಾರಿ ನೌಕರನು ಈ ಸೌಲಭ್ಯವನ್ನು ಪಡೆಯಲು ಅರ್ಹನಿರುವುದಿಲ್ಲ.
4. ಈ ಭತ್ಯೆಯನ್ನು ಕ್ರಮಬದ್ಧಗೂಳಿಸಲು ವಿಧಿಸಿರುವ ಇತರೆ ಷರತ್ತುಗಳು ಮುಂದುವರೆದು ಅನ್ವಯಿಸುತ್ತವೆ ಎಂದು ತಿಳಿಸಿದ್ದಾರೆ.