ಪಿಹೆಚ್ ಡಿ ಸಂಶೋಧನೆಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ.

 



ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿ.ಎಚ್‌.ಡಿ. ಸಂಶೋಧನೆಗೆ ಕರ್ನಾಟಕ ಡಿ.ಎಸ್.ಟಿ. - ಪಿ.ಎಚ್.ಡಿ. ಶಿಷ್ಯವೇತನಕ್ಕೆ ಅರ್ಜಿ ಆಹ್ವಾನಿಸಿದೆ.


2024-25ನೇ ಸಾಲಿನಲ್ಲಿ ಸದರಿ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆ / ಕಾಲೇಜುಗಳಲ್ಲಿ ಈಗಾಗಲೇ ಪಿಎಚ್‌ಡಿ ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಸೆಪ್ಟೆಂಬರ್‌ 30ರ ಒಳಗಾಗಿ ಅರ್ಜಿ ಸಲ್ಲಿಸಬಹುದು.