ಭಾರತದಲ್ಲಿ ಮಾತ್ರವಲ್ಲದೇ ಜಗತ್ತಿನಾದ್ಯಂತ ಮೊದಲಿಗೆ ನವೆಂಬರ್ 20 ರಂದು ಮಕ್ಕಳ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿತ್ತು. ವಿಶ್ವಸಂಸ್ಥೆಯು ಸಾರ್ವತ್ರಿಕ ಮಕ್ಕಳ ದಿನ ಎಂದು ಈ ದಿನವನ್ನು ಘೋಷಣೆ ಮಾಡಿತ್ತು. ಆದರೆ 1964 ರ ನಂತರ ಭಾರತದಲ್ಲಿ ಮಕ್ಕಳ ದಿನಾಚರಣೆ ನವೆಂಬರ್ 14 ರಂದು ಆಚರಣೆ ಆಗುತ್ತಿದೆ.
ಭಾರತದಲ್ಲಿ ಪ್ರತಿವರ್ಷ ನವೆಂಬರ್ 14 ರಂದು ಮಕ್ಕಳ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದ್ದು, ಮಕ್ಕಳ ದಿನಾಚರಣೆ ಮಾಡುವ ಮೂಲಕ ಅವರ ಹಕ್ಕುಗಳು, ಆರೈಕೆ ಮತ್ತು ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ನೆಹರು ಅವರ ಮರಣದ ನಂತರ, ಅವರ ಜನ್ಮದಿನದ ಸವಿನೆನಪಿಗಾಗಿ ನವೆಂಬರ್ 14 ರಂದು ಭಾರತದಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಗುತ್ತದೆ.
ಸ್ವತಂತ್ರ ಭಾರತದ ಮೊದಲ ಪ್ರಧಾನಿ ಆಗಿದ್ದು ಜವಾಹರಲಾಲ್ ನೆಹರು 1947 TO 1964 ರವರೆಗೆ ಅಂದರೆ ಅವರ ಮರಣದವರೆಗೂ ಭಾರತದ ಪ್ರಧಾನಿಯಾಗಿ ಎರಡು ಅವಧಿಯಲ್ಲಿ ಸೇವೆ ಸಲ್ಲಿಸಿದ್ದರು. ಮಕ್ಕಳು ಪ್ರೀತಿಯಿಂದ ನೆಹರು ರವರನ್ನು ಚಾಚಾ ನೆಹರು ಎಂದು ಕರೆಯುತ್ತಿದ್ದರು. ದೇಶದ ಮಕ್ಕಳಿಗೆ ಅಗತ್ಯ ಶಿಕ್ಷಣವನ್ನು ಪೂರೈಸಬೇಕೆಂಬುದು ಅವರ ಧೈಯವಾಗಿತ್ತು. ಆದ್ದರಿಂದ ಅವರ ಸವಿನೆನಪಿಗಾಗಿ ಅವರ ಜನ್ಮ ದಿನಾಂಕದಂದೇ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಈ ದಿನದಂದು ಭಾರತದಾದ್ಯಂತ ಮಕ್ಕಳಿಗಾಗಿ ಮತ್ತು ಅನೇಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.
ವಿದ್ಯಾರ್ಥಿಗಳ ನೆಚ್ಚಿನ ಚಾಚಾ - ಜವಾಹರಲಾಲ್ ನೆಹರು ರವರು " Tomorrow is Yours" ಮಕ್ಕಳಿಗೆ ಯಾವಾಗಲೂ ಹೇಳುತ್ತಿದ್ದರು. ಇದರ ಅರ್ಥ ನಾಳೆ ನಿಮ್ಮದು ಎಂದು. ಭಾರತದ ತರುಣ ಪೀಳಿಗೆಯನ್ನು ಉದ್ದೇಶಿಸಿ ಅವರು ಹೀಗೆ ನುಡಿಯುತ್ತಿದ್ದದ್ದು ತುಂಬಾ ವಿಶೇಷವಾಗಿತ್ತು.
ಭಾರತದ ಸ್ವತಂತ್ರಕ್ಕೆ ಹೋರಾಡಿದ ಪ್ರಮುಖ ನಾಯಕರಲ್ಲಿ ನೆಹರು ಸಹ ಒಬ್ಬರಾಗಿದ್ದರು. ದೇಶದ ಪ್ರಪ್ರಥಮ ಪ್ರಧಾನಿಯಾಗಿ ಇವರ ಜೀವನ ಆದರ್ಶವಾದುದು ಎನ್ನಲಾಗುತ್ತದೆ.
ಜವಾಹರಲಾಲ್ ನೆಹರು ಜೀವನ ಕುರಿತು ನೇಹರು ಸ್ವಾತಂತ್ರ್ಯ ಚಳುವಳಿಯ ಮುಂಚೂಣಿ ನಾಯಕ, ಭಾರತದ ಪ್ರಥಮ ಪ್ರಧಾನ ಮಂತ್ರಿ, ಭಾರತ ರತ್ನ ಪಂಡಿತ್ ಜವಾಹರಲಾಲ್ ನೆಹರು. ಇವರು ಮೋತಿಲಾಲ್ ನೆಹರು ಮತ್ತು ಸ್ವರೂಪ್ ರಾಣಿ ಅವರ ಪುತ್ರರಾಗಿ ಜವಾಹರಲಾಲ್ ನೆಹರು ಅವರು ನವೆಂಬರ್ 14, 1889 ರಲ್ಲಿ ಅಲಹಬಾದ್ನಲ್ಲಿ ಜನಿಸಿದರು. ನೆಹರು ಅವರು ಎರಡು ಬಾರಿ ಭಾರತದ ಪ್ರಧಾನಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಅವರ 135ನೇ ಜನ್ಮ ದಿನ 2024ನೇ ನವೆಂಬರ್ 14 ರಂದು ಜರುಗಿದೆ.
1916 ರಲ್ಲಿ ಕಮಲಾ ಕೌಲ್ ಅವರನ್ನು ವಿವಾಹವಾದರು. ಮಹಾತ್ಮ ಗಾಂಧೀಜಿ ಅವರೊಂದಿಗೆ ಉತ್ತಮ ಸಂಬಂಧ ಕಾಯ್ದುಕೊಂಡಿದ್ದ ನೆಹರು, ಗಾಂಧಿ ಅವರ ಅಹಿಂಸಾ ಹೋರಾಟವನ್ನು ಬೆಂಬಲಿಸಿದ್ದರು. ಮಕ್ಕಳನ್ನು ಹೆಚ್ಚಾಗಿ ಇಷ್ಟುಪಡುತ್ತಿದ್ದ ನೆಹರು ಅವರೇ ತಮ್ಮ ಜನ್ಮದಿನವನ್ನು ಮಕ್ಕಳ ದಿನವನ್ನಾಗಿ ಆಚರಿಸುವಂತೆ ಹೇಳಿದರು.
1947 ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಾಗಿನಿಂದ 1964 ರ ಅವರ ಮರಣದವರೆಗೂ ಭಾರತದ ಪ್ರಧಾನಿಯಾಗಿ ಸೇವೆಸಲ್ಲಿಸಿದರು. ಇವರನ್ನು ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜ್ಯಾತ್ಯಾತೀತ ತತ್ವದ ಸಾರ್ವಭೌಮ ಎಂದು ಕರೆಯಲಾಗುತ್ತದೆ.
1955 ರಲ್ಲಿ, ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೆಹರು ಅವರಿಗೆ ನೀಡಲಾಯಿತು. ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಅವರು ನೆಹರು ಅವರಿಗೆ ಭಾರತ ರತ್ನವನ್ನು ನೀಡಿದರು.