20 ನೇ ನವಂಬರ್ ವಿಶ್ವ ಮಕ್ಕಳ ದಿನಾಚರಣೆ
14 ನೆ ನವಂಬರ್ ಭಾರತದಲ್ಲಿ ಮಕ್ಕಳ ದಿನಾಚರಣೆ. ಪ್ರಪಂಚದಲ್ಲಿ ನವೆಂಬರ್ 20 ರಂದು ಮಕ್ಕಳ ದಿನಾಚರಣೆಯನ್ನು ಪ್ರತಿವರ್ಷ ಆಚರಿಸುವರು. ಈ ದಿನವನ್ನು ಮಕ್ಕಳ ಬಾಲ್ಯವನ್ನು ಸಂಭ್ರಮದಿಂದ ಕಾಣಲು ಆಚರಿಸಲಾಗುವುದು. ಈ ದಿನವನ್ನು ಬಾಲ್ಯದ ಹೆಸರಿನಲ್ಲಿ ಆಚರಿಸಲಾಗುವುದು.
ಮಕ್ಕಳ ದಿನವನ್ನು 1959 ಕ್ಕೆ ಮೊದಲು ಜಗತ್ತಿನಾದ್ಯಂತ ಅಕ್ಟೋಬರ್ ತಿಂಗಳಲ್ಲಿ ಆಚರಿಸುತ್ತಿದ್ದರು. ಈ ದಿನ ವನ್ನು ವಿಶ್ವ ಸಂಸ್ಥೆಯ ಸಾಮಾನ್ಯಸಭೆಯು ತೀರ್ಮಾನಿಸಿದಂತೆ ಪ್ರಥಮ ಬಾರಿಗೆ 1954 ರಲ್ಲಿ ಆಚರಿಸಲಾಯಿತು. ಇದನ್ನು ಮೂಲಭೂತ ಉದ್ಧೇಶ ಸಮುದಾಯದ ವಿನಿಮಯದ ಹೆಚ್ಚಳ ಮತ್ತು ಮಕ್ಕಳ ತಿಳುವಳಿಕೆ ಜಾಸ್ತಿ ಮಾಡುವುದು, ಅಲ್ಲದೆ ಮಕ್ಕಳಿಗೆ ಅನುಕೂಲವಾದ ಕಲ್ಯಾಣ ಕಾರ್ಯಕ್ರಮಗಳನ್ನು ಉತ್ತೇಜಿಸಲು ಜಗತ್ತಿನಾದ್ಯಂತ ಆಚರಣೆಯನ್ನು ಪ್ರಾರಂಭಿಸಲಾಯಿತು.
ನವೆಂಬರ್ 20 ನ್ನು ವಿಶ್ವ ಮಕ್ಕಳ ದಿನವಾಗಿ ಆರಿಸಲು ಕಾರಣ, ಅದು ವಿಶ್ವ ಸಂಸ್ಥೆಯು ಸಾಮಾನ್ಯ ಸಭೆಯು ಮಕ್ಕಳ ಹಕ್ಕುಗಳ ಘೋಷಣೆಯನ್ನು 1959ರಲ್ಲಿ, ಅಂಗೀಕರಿಸಿದ ದಿನ. ಮಕ್ಕಳ ಹಕ್ಕುಗಳ ಸಮಾವೇಶವು 1989 ರಲ್ಲಿ ಅದಕ್ಕೆ ಸಹಿ ಮಾಡಿತು. ಆಗಿನಿಂದ 191 ದೇಶಗಳು ಇದನ್ನು ಒಪ್ಪಿವೆ.