PM Vidyalakshmi- ಭಾರತದ ಯುವಜನತೆ, ಗುಣಮಟ್ಟದ ಉನ್ನತ ಶಿಕ್ಷಣವನ್ನು ಪಡೆಯುವ ಸಲುವಾಗಿ, ಅವರಿಗೆ ಆರ್ಥಿಕ ಬೆಂಬಲವನ್ನು ಒದಗಿಸುವ ‘ಪ್ರಧಾನಮಂತ್ರಿ ವಿದ್ಯಾಲಕ್ಷ್ಮಿ’ ಯೋಜನೆಗೆ ಬುಧವಾರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಯೋಜನೆ ಅನ್ವಯ ಉನ್ನತ ಶಿಕ್ಷಣಕ್ಕೆ ಸೇರ್ಪಡೆಯಾಗುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಯಾವುದೇ ಮೇಲಾಧಾರ ಇಲ್ಲದೆ ಗ್ಯಾರಂಟಿ ರಹಿತವಾಗಿ ಸಾಲ ನೀಡಲಾಗುತ್ತದೆ. ಕುಟುಂಬದ ಆದಾಯ 8 ಲಕ್ಷ ರೂ.ಗಿಂತ ಕಡಿಮೆ ಇದ್ದವರು ಈ ಸಾಲಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಏಳೂವರೆ ಲಕ್ಷದವರೆಗಿನ ಸಾಲಕ್ಕೆ ಕೇಂದ್ರ ಸರ್ಕಾರ ಶೇ.75ರಷ್ಟು ಖಾತರಿಯನ್ನು ನೀಡುತ್ತದೆ. 10 ಲಕ್ಷ ರೂಪಾಯಿವರೆಗಿನ ಸಾಲವನ್ನು ಕೇವಲ ಶೇ.3ರ ಬಡ್ಡಿಯಲ್ಲಿ ನೀಡಲಾಗುವುದು. ಈಗಾಗಲೇ 4.5 ಲಕ್ಷ ರೂಪಾಯಿಗಿಂತ ಕಡಿಮೆ ಆದಾಯ ಇರುವವರಿಗೆ ನೀಡುತ್ತಿರುವ ಸಂಪೂರ್ಣ ಬಡ್ಡಿ ರಹಿತ ಆದಾಯಕ್ಕೆ ಈಗಿನದು ಹೆಚ್ಚುವರಿ ಸೇರ್ಪಡೆಯಾಗುತ್ತದೆ.
ಸಂಪೂರ್ಣ ಡಿಜಿಟಲ್ ಯೋಜನೆ
ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಯು ಯಾವುದೇ ಮೇಲಾಧಾರ, ಗ್ಯಾರಂಟಿ ಇಲ್ಲದೆ ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳಿಂದ ಸಾಲವನ್ನು ಪಡೆಯಬಹುದು. ಈ ಯೋಜನೆಯು ಸರಳ, ಪಾರದರ್ಶಕ ಮತ್ತು ವಿದ್ಯಾರ್ಥಿಸ್ನೇಹಿ ವ್ಯವಸ್ಥೆಯ ಮೂಲಕ ಕಾರ್ಯನಿರ್ವಹಿಸುತ್ತದೆ. ಸಂಪೂರ್ಣವಾಗಿ ಡಿಜಿಟಲ್ ಆಗಿರುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಮುಖ್ಯಾಂಶಗಳು
* ಕುಟುಂಬದ ಆದಾಯ 8 ಲಕ್ಷ ರೂ. ಇದ್ದವರಿಗೆ ಉನ್ನತ ಶಿಕ್ಷಣಕ್ಕೆ ಕಡಿಮೆ ದರದಲ್ಲಿ ಸಾಲ
* ವಿಶೇಷ ಸಾಲಕ್ಕೆ ಶೂರಿಟಿ, ಗ್ಯಾರಂಟಿ ಅಗತ್ಯವಿಲ್ಲ
* ಸರಳ, ಪಾರದರ್ಶಕ, ವಿದ್ಯಾರ್ಥಿಸ್ನೇಹಿ ಅಪ್ಲಿಕೇಶನ್ ಪ್ರಕ್ರಿಯೆ
* 7.5 ಲಕ್ಷದವರೆಗಿನ ಸಾಲಕ್ಕೆ ಕೇಂದ್ರದಿಂದ ಶೇ.75 ಖಾತರಿ
* 10 ಲಕ್ಷ ರೂ.ದವರೆಗಿನ ಸಾಲಕ್ಕೆ ಶೇ.3 ಬಡ್ಡಿ ರಿಯಾಯಿತಿ
ಯೋಜನೆಯ ಉದ್ದೇಶ
ಆರ್ಥಿಕ ಪರಿಸ್ಥಿತಿಯಿಂದಾಗಿ ಉನ್ನತ ಶಿಕ್ಷಣದ ಕನಸನ್ನು ವಿದ್ಯಾರ್ಥಿಗಳು ಕೈಬಿಡಬಾರದು ಎನ್ನುವ ಕಾರಣಕ್ಕಾಗಿ ಈ ಯೋಜನೆಯನ್ನು ಆರಂಭಿಸಲಾಗಿದೆ. ಪ್ರತಿ ವರ್ಷ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಇದರ ಲಾಭ ದೊರೆಯಲಿದೆ. ಉನ್ನತ ಶಿಕ್ಷಣ ಇಲಾಖೆಯು ‘ಪಿಎಂ-ವಿದ್ಯಾಲಕ್ಷ್ಮಿ’ ಎಂಬ ಏಕೀಕೃತ ಪೋರ್ಟಲ್ ಅನ್ನು ಹೊಂದಿದ್ದು, ಸರಳೀಕೃತ ಅಪ್ಲಿಕೇಶನ್ ಪ್ರಕ್ರಿಯೆಯ ಮೂಲಕ ವಿದ್ಯಾರ್ಥಿಗಳು ಶಿಕ್ಷಣ ಸಾಲ ಮತು ಬಡ್ಡಿ ರಿಯಾಯಿತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
2024-25 ರಿಂದ 2030-31ರ ಅವಧಿಯಲ್ಲಿ ಇದಕ್ಕೆ 3,600 ಕೋಟಿ ರೂಪಾಯಿ ವೆಚ್ಚ ಅಂದಾಜಿಸಲಾಗಿದ್ದು, 7 ಲಕ್ಷ ಹೊಸ ವಿದ್ಯಾರ್ಥಿಗಳು ಈ ಬಡ್ಡಿ ರಿಯಾಯಿತಿಯ ಲಾಭವನ್ನು ಪಡೆಯುವ ನಿರೀಕ್ಷೆಯಿದೆ.
ಪ್ರತಿಭಾನ್ವಿತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಆರ್ಥಿಕ ನೆರವು ಒದಗಿಸುವ ಉದ್ದೇಶದ ‘ಪಿಎಂ ವಿದ್ಯಾಲಕ್ಷ್ಮಿ’ ಯೋಜನೆಗೆ ಕೇಂದ್ರ ಸಚಿವ ಸಂಪುಟ ಸಭೆ ಬುಧವಾರ ಅನುಮೋದನೆ ನೀಡಿದೆ.
ಈ ಯೋಜನೆಯ ಅಡಿ, ಗುಣಮಟ್ಟದ ಉನ್ನತ ಶಿಕ್ಷಣ ನೀಡುವ ಸಂಸ್ಥೆಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಬ್ಯಾಂಕ್ ಗಳಲ್ಲಿ ಬಡ್ಡಿರಹಿತ, ಅಡಮಾನ ರಹಿತ ಸಾಲ ದೊರೆಯಲಿದೆ. ವಿದ್ಯಾರ್ಥಿಗಳ ಬೋಧನಾ ಶುಲ್ಕ ಸೇರಿದಂತೆ ಅವರು ಆಯ್ಕೆ ಮಾಡಿಕೊಂಡ ಕೋರ್ಸ್‌ಗೆ ವ್ಯಯಿಸುವ ಇತರ ಖರ್ಚನ್ನೂ ಈ ಯೋಜನೆಯಡಿ ಭರಿಸಲಾಗುವುದು.
ಆರಂಭದಲ್ಲಿ 860 ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುವ 22 ಲಕ್ಷ ವಿದ್ಯಾರ್ಥಿಗಳಿಗೆ ಈ ಯೋಜನೆಯಡಿ ಹಣಕಾಸಿನ ನೆರವು ದೊರೆಯಲಿದೆ. 8 ಲಕ್ಷ ರೂ.ವರೆಗೆ ವಾರ್ಷಿಕ ಕೌಟುಂಬಿಕ ಆದಾಯ ಹೊಂದಿರುವ ಹಾಗೂ ಇತರೆ ಯಾವುದೇ ಸರಕಾರಿ ವಿದ್ಯಾರ್ಥಿವೇತನಕ್ಕೆ ಅರ್ಹತೆ ಪಡೆಯದ ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ವರೆಗೆ 3% ರಿಯಾಯಿತಿ ಬಡ್ಡಿ ದರದಲ್ಲಿ ಸಾಲ ಸೌಲಭ್ಯವೂ ದೊರೆಯಲಿದೆ...