i) ಯಾವುದೇ ಶಿಕ್ಷಕರನ್ನು/ಶಾಲಾ ಮುಖ್ಯೋಪಾಧ್ಯಾಯರನ್ನು ಯಾವುದೇ ತರಬೇತಿ ಕಾರ್ಯಕ್ರಮಗಳಿಗೆ, ಕಾರ್ಯಾಗಾರಗಳಿಗೆ, ಸಭೆಗಳಿಗೆ, ಇತರೆ ಚಟುವಟಿಕೆಗಳಿಗೆ ಶಾಲಾ ದಿನಗಳಲ್ಲಿ, ಶಾಲಾ ಸಮಯದಲ್ಲಿ ನಿಯೋಜನೆ/ಓ.ಓ.ಡಿ, ಮೌಖಿಕ ಅಥವಾ ಲಿಖಿತ ಆದೇಶಗಳ ಮೂಲಕ ಕಳುಹಿಸಬಾರದು. ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಹ ಇಂತಹ ನಿರ್ದೇಶನಗಳನ್ನು ನೀಡಬಾರದು.