2026-27ನೇ ಸಾಲಿನ ಮೆಟ್ರಿಕ್-ಪೂರ್ವ (Pre-Matric) ವಸತಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

   2026-27ನೇ ಸಾಲಿನ ಮೆಟ್ರಿಕ್-ಪೂರ್ವ (Pre-Matric) ವಸತಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

   ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಉಜ್ವಲಗೊಳಿಸಲು ಸರ್ಕಾರ ಈ ವಸತಿ ನಿಲಯಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ. 5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಮೆಟ್ರಿಕ್-ಪೂರ್ವ ವಸತಿ ನಿಲಯಗಳಿಗೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ. ದೂರದ ಊರುಗಳಿಂದ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ, ವಿಶೇಷವಾಗಿ ಗ್ರಾಮೀಣ ಭಾಗದ ಹೆಣ್ಣುಮಕ್ಕಳಿಗೆ ಈ ಯೋಜನೆಯು ಅತ್ಯಂತ ನೆರವಾಗಲಿದೆ.


ಅಗತ್ಯವಿರುವ ದಾಖಲೆಗಳು :


1. SATS ಐಡಿ (ID)

2. ಜಾತಿ ಮತ್ತುಆದಾಯ  ಪ್ರಮಾಣಪತ್ರ (RD ಸಂಖ್ಯೆ)

3. ಆಧಾರ್ ಸಂಖ್ಯೆ

4. ಮೊಬೈಲ್ ಸಂಖ್ಯೆ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30/06/2026


ಲಿಂಕ್ : https://swdhmis.karnataka.gov.in